ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ
ಮುಂಬರುವ ಲೋಕಸಭಾ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆ ತಯಾರಿ ಹಾಗೂ ಹುಬ್ಬಳ್ಳಿಯಲ್ಲಿ ಫೆ. 17ರಂದು ನಡೆಯಲಿರುವ ರೈತ ಸಮಾವೇಶದ ಕುರಿತು ಚರ್ಚಿಸಲು ಮಂಗಳವಾರ ಹುಬ್ಬಳ್ಳಿಯಲ್ಲಿ ಜೆಡಿಎಸ್ ಸಮಾವೇಶ ನಡೆಯಲಿದೆ.
ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ನವಲಗುಂದ ಮಾಜಿ ಶಾಸಕ ಎನ್. ಹೆಚ್.ಕೋನರಡ್ಡಿ ಈ ವಿಷಯ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ನೆಹರೂ ಮೈದಾನದ ಬಳಿಯಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಜೆಡಿಎಸ್ ವಿವಿಧ ಘಟಕಗಳ ಪದಾಧಿಕಾರಿಗಳ, ಮುಖಂಡರ, ಕಾರ್ಯಕರ್ತರ ಹಾಗೂ ಅಭಿಮಾನಿಗಳ ಸಭೆ ಕರೆಯಲಾಗಿದೆ. ವಿಧಾನ ಪರಿಷತ್ ಹಿರಿಯ ಸದಸ್ಯ ಹಾಗೂ ಮಾಜಿ ಸಚಿವ ಬಸವರಾಜ ಹೊರಟ್ಟಿ ಸಹ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಧಾರವಾಡ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರ ಮಠ, ಹಾವೇರಿ ಜಿಲ್ಲಾಧ್ಯಕ್ಷ ಅಶೋಕ ಬೇವಿನಮರದ, ಗದಗ ಜಿಲ್ಲಾಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಬಾಗಲಕೋಟಿ ಜಿಲ್ಲಾಧ್ಯಕ್ಷ ಎಸ್.ಆರ . ನವಲಿ ಹಿರೇಮಠ, ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಬಿ.ಆರ್. ನಾಯ್ಕ. ಕುಂದಗೋಳದ ಮಾಜಿ ಶಾಸಕ ಎಂ.ಎಸ್. ಅಕ್ಕಿ, ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜೆಡಿಎಸ್ ಪಕ್ಷದ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ