ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕೊರೊನಾ ಲಾಕ್ಡೌನ್ ನಿಂದಾಗಿ ಹೊರ ರಾಜ್ಯದಲ್ಲಿ ಸಿಲುಕಿರುವ ಕನ್ನಡಿಗ ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೋಂದಾಯಿಸಿಕೊಂಡಿದ್ದು, ಬಾಗಲಕೋಟೆ ಜಿಲ್ಲೆಗೆ 990ಜನ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರ-481, ಗೋವಾ-128, ತಮಿಳುನಾಡು-49, ತೆಲಂಗಾಣ-47, ಆಂಧ್ರಪ್ರದೇಶ-45, ಗುಜರಾತ್-45,ಕೇರಳ-43, ರಾಜಸ್ಥಾನ-43,ದೆಹಲಿ-25,ಬಿಹಾರ-22, ಉತ್ತರಪ್ರದೇಶ-20 ಸೇರಿ ವಿವಿಧ ರಾಜ್ಯದಿಂದ ಜಿಲ್ಲೆಗೆ ಒಟ್ಟು 990 ಮಂದಿ ಇಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ.
ಬಾಗಲಕೋಟೆ ಜಿಲ್ಲೆಗೆ ವಲಸಿಗರು ಮಹಾರಾಷ್ಟ್ರ ರಾಜ್ಯದಿಂದಲೇ ಹೆಚ್ಚು ಆಗಮಿಸುತ್ತಿದ್ದಾರೆ. ಆದರೆ, ಮಹಾರಾಷ್ಟ್ರದಲ್ಲಿ ಹೆಚ್ಚು ಕೊರೋನಾ ಸೋಂಕಿತರು ಕಂಡು ಬಂದಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಹೊಸ ತಲೆನೋವು ಆರಂಭವಾದಂತಾಗಿದೆ. ಅಲ್ಲದೆ, ಜಿಲ್ಲೆಗೆ ಹೊರರಾಜ್ಯದ ವಲಸಿಗರು ಬಂದ ವೇಳೆ ತೀವ್ರ ತಪಾಸಣೆಗೆ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ