ಅಗ್ನೀವೀರ ನೇಮಕಾತಿ ರ್ಯಾಲಿ ಆ.8 ರಿಂದ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಗ್ನವೀರ ನೇಮಕಾತಿ ರ‌್ಯಾಲಿಯು ಆಗಸ್ಟ್ 8ರಿಂದ 25 ರವರೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯಲಿದೆ.
ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರ ಮತ್ತು ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಈಗಾಗಲೇ ನಡೆದಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ಪ್ರಕಟಿಸಲಾಗಿದ್ದು, ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರ ಕಳಿಸಲಾಗಿರುತ್ತದೆ.
ಪ್ರವೇಶಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕಗಳಂದು ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದು.
ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಅರ್ಹತೆ/ಸಾಧನೆ ಆಧರಿಸಿ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಆಯ್ಕೆ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳ ಆಸೆ-ಆಮಿಷಗಳಿಗೆ ಮೋಸ ಹೋಗಬಾರದು.ಅಭ್ಯರ್ಥಿಗಳ ಅರ್ಹತೆ ಮತ್ತು ಕ್ಷಮತೆ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ ಎಂದು ಅಗ್ನಿವೀರ ನೇಮಕಾತಿ ವಿಭಾಗದ ನಿರ್ದೇಶಕರಾದ ಕರ್ನಲ್ ಎ.ಕೆ.ಉಪಾಧ್ಯಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.