Latest

*ಮಾಜಿ ಸಿಎಂ ಯಡಿಯೂರಪ್ಪ ಸಂಬಂಧಿ ಎನ್.ಆರ್.ಸಂತೋಷ್ JDS ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ;ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಬಂಧಿ ಎನ್.ಆರ್.ಸಂತೋಷ್ ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎ ಹೆಚ್.ಡಿ.ಕುಮರಸ್ವಾಮಿ ಸಮ್ಮುಖದಲ್ಲಿ ಎ.ಆರ್.ಸಂತೋಷ್ ಜೆಡಿಎಸ್ ಗೆ ಸೇರ್ಪಡೆಯಾದರು. ಎನ್.ಆರ್.ಸಂತೋಷ್ ಅರಸಿಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಹಾಸನ ಜಿಲ್ಲೆಯ ಅರಸಿಕೆರೆ ಕ್ಷೇತ್ರದಿಂದ ಎನ್.ಆರ್.ಸಂತೋಷ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ರಸಿಕೆರೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಶೋಕ್ ಅವರ ಮನವೊಲಿಸಿ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

https://pragati.taskdun.com/cm-basavaraj-bommainominationfileshiggavi/

Home add -Advt

Related Articles

Back to top button