Latest

*ಬೆಂಕಿ ಅವಘಡ; ಮಹಿಳೆ ಸಜೀವದಹನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಮಹಿಳೆಯೋರ್ವರು ಸಜೀವದಹನಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ದುರಂತದಲ್ಲಿ ಮಹಿಳೆ ಸಜೀವದಹನಗೊಂಡಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ ಮಹಿಳೆಯನ್ನು ಮೇರಿ (55) ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡುರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

*ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ*

https://pragati.taskdun.com/kundapura-police-constablesuicideuttara-kannada/

Related Articles

Back to top button