Latest

*ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ 2025 ನೇ ಸಾಲಿನ ರಾಷ್ಟ್ರ ಪ್ರಶಸ್ತಿ ನೀಡುವ ಕುರಿತು ಆನ್ ಲೈನ್ ಮೂಲಕ 15-05-2025 ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು 31-07-2025 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ/ಸಂಸ್ಥೆಗಳು ನಿಗದಿತ ಅರ್ಜಿ ನಮೋನೆಗಳನ್ನು ಜುಲೈ 31. 2025 8  http://www.depwd.gov.in a www.awards.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭೌತಿಕ ಅರ್ಜಿಗಳನ್ನು /ನಾಮನಿರ್ದೇಶನಗಳನ್ನು ವೆಬ್‌ಸೈಟ್ ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ http://www.awards.gov.in ವೆಬ್ ಸೈಟ್ ಅನ್ನು ಅಥವಾ ಕಛೇರಿಯ ದೂರವಾಣಿ ಸಂಖ್ಯೆ: 0831-2476096/7 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button