Latest

ಅನಂತ್ ಕುಮಾರ್ ಹೆಗಡೆ ಪರ ಕಾಗೇರಿ ಮತಯಾಚನೆ

ಪ್ರಗತಿವಾಹಿನಿ ಸುದ್ದಿ, ಶಿರಸಿ
ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ  ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ ಪರ ಮಾಜಿ ಸಚಿವ, ಹಾಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮತಯಾಚನೆ ಮಾಡಿದರು.
ಶಿರಸಿ ನಗರದ ಮಾರಿಕಾಂಬಾ ದೇಗುಲದಿಂದ ಹೊರಟು ಶಿವಾಜಿ ಚೌಕ ಸೇರಿದಂತೆ ಬಸ್ಟ್ಯಾಂಡ್ ವೃತ್ತದ ವರೆಗೂ ಎಲ್ಲ ಮನೆ ಮನೆ ಹಾಗೂ ಅಂಗಡಿಗಳಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಬಿಜೆಪಿಯ ನೂರಕ್ಕೂ ಹೆಚ್ಚು ಕಾರ್ಯಕರ್ತರು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಾಥ್ ನೀಡಿದರು.
ಕಳೆದ ವಿಧಾನಸಭಾ ಚುನಾವಣೆಯ 8 ಕ್ಷೇತ್ರದಲ್ಲಿ 6 ಕ್ಷೇತ್ರವನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು, ಕಾಂಗ್ರೆಸ್ 2 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿತ್ತು. ಜೆಡಿಎಸ್ ಜಿಲ್ಲೆಯಲ್ಲಿ ಸಂಪೂರ್ಣ ನೆಲ ಕಚ್ಚಿತ್ತು. ಆದ್ರೆ ಇದೀಗ ಜಿಲ್ಲೆಯ ಲೋಕಸಭಾ ಚುನಾವಣೆಗೆ  ಜೆಡಿಎಸ್ ಅಭ್ಯರ್ಥಿಯನ್ನು ರಾಜ್ಯ ಮೈತ್ರಿ ಸರ್ಕಾರ ಕಣಕ್ಕಿಳಿಸಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನ  ಗೆಲ್ಲಲು ಬಿಜೆಪಿಗರು ತಂತ್ರ ಹೆಣೆದಿದ್ದಾರೆ. ಈಗಾಗಲೇ 5 ಬಾರಿ ಆಯ್ಕೆಯಾಗಿ ಸಂಸದರಾಗಿರುವ ಬಿಜೆಪಿ  ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆ 6ನೇ ಬಾರಿಯ ಗೆಲುವಿಗಾಗಿ ಜಿಲ್ಲೆಯಲ್ಲಿ ಸಾಕಷ್ಟು ಕಸರತ್ತು ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button