Latest

ಅರಭಾವಿಯಿಂದಲೇ 50 ಸಾವಿರ ಮತಗಳ ಮುನ್ನಡೆ : ಅಂಗಡಿ ವಿಶ್ವಾಸ

ಪ್ರಗತಿವಾಹಿನಿ ಸುದ್ದಿ, ಘಟಪ್ರಭಾ :

ಏ.23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರ ಸಹಕಾರದಿಂದ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವನ್ನು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಸುರೇಶ ಅಂಗಡಿ ವ್ಯಕ್ತಪಡಿಸಿದರು.


ರವಿವಾರ ಪ್ರಭಾಶುಗರ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಕ್ತಿಯಿಂದಲೇ ಅರಭಾವಿ ಮತಕ್ಷೇತ್ರವೊಂದರಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ದೊರೆಯಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಜಗದೀಶ ಹಿರೇಮನಿ ಮಾತನಾಡಿ, ಸಂಸದ ಸುರೇಶ ಅಂಗಡಿಯವರು 4ನೇ ಬಾರಿಗೆ ಚುನಾವಣಾ ಕಣದಲ್ಲಿದ್ದು, ಈ ಬಾರಿ ಆಯ್ಕೆಯಾದರೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ. ಇದರಿಂದ ಬೆಳಗಾವಿ ಜಿಲ್ಲೆಯು ಸಮಗ್ರ ಅಭಿವೃದ್ಧಿ ಕಾಣಲಿದೆ ಎಂದು ಹೇಳಿದರು.
ಆರ್‍ಎಸ್‍ಎಸ್ ಮುಖಂಡ ಕೃಷ್ಣಾನಂದ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗೂಳಪ್ಪ ಹೊಸಮನಿ, ಗುರುಪಾದ ಕಳ್ಳಿ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಮಂಡಳ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ವೇದಿಕೆಯಲ್ಲಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button