ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಸಿಬಿಐ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ರಾಜೀನಾಮೆ ನೀಡಿದ್ದಾರೆ. ಗುರುವಾರವಷ್ಟೆ ಅವನ್ನು ಅಗ್ನಿಶಾಮಕದಳದ ಪ್ರಧಾನ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿತ್ತು.
ಸಿಬಿಐಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಪ್ರಕರಣದಲ್ಲಿ ವರ್ಮಾ ಹೆಸರು ಕೇಳಿಬಂದಿದ್ದರಿಂದ ಅವರನ್ನು ಕೇಂದ್ಕರ ಸರಕಾರ ಡ್ಡಾಯ ರಜೆ ಮೇಲೆ ಕಳಿಸಿತ್ತು. ನಂತರ ಸುಪ್ರಿಂ ಕೋರ್ಟ್ ಕಡ್ಡಾಯ ರಜೆ ರದ್ದುಪಡಿಸಿ ಅವರನ್ನು ಕಡ್ಡಾಯ ರಜೆಮೇಲೆ ಕಳಿಸುವ ಅಧಿಕಾರ ಕೇಂದ್ರ ಸರಕಾರಕ್ಕಿಲ್ಲ ಎಂದಿತ್ತು. ಮತ್ತೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಆದರೆ ಗುರುವಾರ ವರ್ಮಾ ಭ್ರಷ್ಠಾಚಾರ ಎಸಗಿದ್ದಾರೆ ಎಂದು ತನಿಖಾ ಸಂಸ್ಥೆ ವರದಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಇದ್ದ ಆಯ್ಕೆ ಸಮಿತಿ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವರ್ಗಾವಣೆ ಮಾಡಿ, ಅಗ್ನಿ ಶಾಮಕದಳದ ಪ್ರಧಾನ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಕೇಂದ್ರ ತನಿಖಾ ದಳದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಲೋಕ್ ವರ್ಮಾ ಅವರನ್ನು ಕೇಂದ್ರ ಸರ್ಕಾರ ಕಡ್ಡಾಯ ರಜೆಯ ಮೇಲೆ ಕಳಿಸಿತ್ತು. ಕೇಂದ್ರ ಸರ್ಕಾರದ ಈ ನಿರ್ಣಯವನ್ನು ಪ್ರಶ್ನಿಸಿ ಅಲೋಕ್ ವರ್ಮಾ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ