Latest

ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಪರೀಕ್ಷೆ ಎದುರಿಸಿ -ಎ.ಬಿ. ಪುಂಡಲೀಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ 
ಎಸ್ಸೆಸ್ಸೆಲ್ಸಿ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಹಂತವಾಗಿದೆ. ವಿದ್ಯಾರ್ಥಿಗಳ ಉಚ್ಚ ಶಿಕ್ಷಣ ಅವರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಧನೆಯ ಮೇಲೆ ಅವಲಂಬಿಸಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಪ್ರತಿಯೊಂದು ವಿಷಯವನ್ನು ಮನವರಿಕೆ ಮಾಡಿಕೊಂಡು ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಪರೀಕ್ಷೆ ಎದುರಿಸಿ ಸಫಲರಾಗಬೇಕೆಂದು ಬೆಳಗಾವಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಬಿ. ಪುಂಡಲೀಕ ಹೇಳಿದರು.
ನಗರದ ಮರಾಠಾ ಮಂದಿರ ಮಂಗಲ ಕಾರ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತಿಯಿಂದ ನಗರದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕನ್ನಡ, ಆಂಗ್ಲ ಮಾಧ್ಯಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಅಭಿಪ್ರೇರಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 
ಉದ್ಯಮಿ ಹಾಗೂ ಸಮಾಜ ಸೇವಕ ಅಪ್ಪಾಸಾಹೇಬ ಗುರವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಡಿ. ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಡಾ. ಗುರುರಾಜ ಬುಲಬುಲೆ ಹಾಗೂ ಎಂ.ಐ. ಪೂಜಾರ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎ.ಎನ್. ಪ್ಯಾಟಿ, ಎಂ.ಜಿ. ಪಾಟೀಲ, ಏಕನಾಥ ಪಾಟೀಲ, ಬಿ.ಸಿ. ಮುದಕನಗೌಡರ ಉಪಸ್ಥಿತರಿದ್ದರು.
ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಗೂ ಪ್ರಾರ್ಥನೆ ಪ್ರಸ್ತುತ ಪಡಿಸಿದರು. ಆರ್.ಜಿ. ಚಳಗೇರ ಸ್ವಾಗತಿಸಿದರು. ಆರ್.ಎಂ. ಜವಳೇಕರ ಪ್ರಾಸ್ತಾವಿಕ ಮಾತನಾಡಿದರು. ಎಸ್.ಎಂ. ವಾಲಿ ನಿರೂಪಿಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
(ಪ್ರಗತಿವಾಹಿನಿ ಸುದ್ದಿಯ ಲಿಂಕ್ ಗಳನ್ನು ಇತರರಿಗೆ ಹಂಚಿರಿ)

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button