ಪ್ರಗತಿವಾಹಿನಿ ಸುದ್ದಿ, ತುಮಕೂರು
ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಬುಧವಾರ ಬೆಳಗಿನಜಾವ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿದೆ.
ಮುಂಜಾನೆ 4 ಗಂಟೆಗೆ ಅವರನ್ನು ಮಠಕ್ಕೆ ಕರೆತರಲಾಗಿದ್ದು, ಸ್ವಾಮಿಗಳ ಅಪೇಕ್ಷೆಯಂತೆ ಅವರನ್ನು ಸ್ಥಳಾಂತರಿಸಲಾಗಿದ್ದು, ಮಠದಲ್ಲೇ ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯ ಡಾ.ಪರಮೇಶ್ವರ ತಿಳಿಸಿದ್ದಾರೆ.
ಸ್ವಾಮಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆರೋಗ್ಯ ಸ್ಥಿರವಾಗಿದೆ. ಅವರ ದರ್ಶನಕ್ಕೆ ಯಾರನ್ನೂ ಬಿಡಲಾಗುತ್ತಿಲ್ಲ ಎಂದು ಮಠದ ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ