
ಆರೋಗ್ಯ ಇಲಾಖೆಯಿಂದ ಆತಂಕಕಾರಿ ವರದಿ ಬಹಿರಂಗ
ಪ್ರಗತಿವಾಹಿನಿ ಸುದ್ದಿ: ಇಡ್ಲಿ ಪ್ರಿಯರಿಗೆ ಆರೋಗ್ಯ ಇಲಾಖೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಇಡ್ಲಿ ಸೇವನೆಯಿಂದ ಆರೋಗ್ಯ ಸಮಸ್ಯೆಯುಂಟಾಗಬಹುದು. ಕ್ಯಾನ್ಸರ್, ಹೃದಯಾಘಾತದಂತಹ ಪ್ರಕರಣ ಹೆಚ್ಚಬಹುದು ಎಂಬ ಆಘಾತಕಾರಿ ವರದಿ ನೀಡಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿ ವರದಿ ನೀಡಿದೆ. ಈ ವೇಳೆ ಬೆಂಗಳೂರಿನ ಹಲವು ಹೋಟೆಲ್ ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತವಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬೆಂಗಳೂರಿನ ವಿವಿಧೆಡೆಯ ಹೋಟೆಲ್ ಗಳ ಇಡ್ಲಿ ಮಾದರಿಯನ್ನು ಆರೋಗ್ಯ ಇಲಾಖೆ ಪ್ರಯೋಗಕ್ಕೆ ಒಳಪಡಿಸಿದ್ದು, ಈ ವೇಳೆ 35ಕ್ಕೂ ಹೆಚ್ಚು ಇಡ್ಲಿ ಮಾದರಿಗಳು ಅಸುರಕ್ಷಿತ ಎಂಬುದು ತಿಳಿದುಬಂದಿದೆ.
ಬೆಂಗಳೂರಿನ ಹಲವೆಡೆಗಳಲ್ಲಿ ಇತ್ತೀಚೆಗೆ ಇಡ್ಲಿ ತಯಾರಿಸುವಾಗ ಬಟ್ಟೆ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಾರೆ. ಆಹಾರ ಬಡಿಸುವಾಗಲೂ ಹಾಗೂ ಪ್ಯಾಕ್ ಮಾಡುವಾಗಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆ ಶಾಖಕ್ಕೆ ಹಾನಿಕಾರಕ ವಸ್ತುಗಳನ್ನು ಹೊರಸೂಸುತ್ತದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಿಳಿಸಿದೆ.
ತಜ್ಞರ ಎಚ್ಚರಿಕೆ ಬೆನ್ನಲ್ಲೇ ಆಹಾರ ಇಲಾಖೆ ಬೆಂಗಳೂರಿನ ಹಲವೆಡೆ ಇಡ್ಲಿ ಮಾದರಿ ಸಂಗ್ರಹಿಸಿದೆ. 500ಕ್ಕೂ ಹೆಚ್ಚು ಇಡ್ಲಿ ಸ್ಯಾಮ್ಪಲ್ ಕಲೆಕ್ಟ್ ಮಾಡಲಾಗಿದ್ದು, ಅವುಗಳಲ್ಲಿ 35 ಇಡ್ಲಿ ಅಸುರಕ್ಷಿತ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ