Latest
*ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಬೆಲೆ ಏರಿಕೆ*: *ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ*: *ಪ್ರಲ್ಹಾದ್ ಜೋಶಿ ವಾಗ್ದಾಳಿ*

ಕರ್ನಾಟಕದ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭಾರಿ ಬೆಲೆ ಏರಿಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ತನ್ನ ಆರ್ಥಿಕ ದುರಾಡಳಿತ ಹಾಗೂ ಖಾಲಿ ಬೊಕ್ಕಸವನ್ನು ಮುಚ್ಚಿಕೊಳ್ಳಲು ಕೆಎಂಎಫ್ (KMF) ಮೂಲಕ ಮೊಸರಿನ ದರವನ್ನು ಅತಿರೇಕದ ಮಟ್ಟಕ್ಕೆ ಏರಿಸಲಾಗಿದೆ ಎಂದು ಕಿಡಿಕಾರಿದ್ದಾರೆ.




