Latest

*ಇಸ್ರೇಲ್ ಪ್ರಧಾನಿ, ಯುಎಇ ಅಧ್ಯಕ್ಷರ ಜೊತೆ ಮೋದಿ ಫೋನ್ ಕಾಲ್*

ಪ್ರಗತಿವಾಹಿನಿ ಸುದ್ದಿ: ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಒತ್ತಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ಮೋದಿ, ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತದ ಕಳವಳಗಳನ್ನು ತಿಳಿಸಿದ್ದೇನೆ. ಮತ್ತು ನಾಗರಿಕರ ಸುರಕ್ಷತೆಯನ್ನ ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಿ ಹೇಳಿದ್ದೇನೆ. ಯುದ್ಧವನ್ನ ಬೇಗನೆ ನಿಲ್ಲಿಸುವಂತೆ ಭಾರತ ಪುನರುಚ್ಚರಿಸುತ್ತದೆ ಎಂದು ತಿಳಿಸಿರುವುದಾಗಿ ಬರೆದುಕೊಂಡಿದ್ದಾರೆ.

Home add -Advt

ಇನ್ನೂ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ರೊಂದಿಗೂ ಮೋದಿ ಮಾತನಾಡಿದ್ದು, ಯುಎಇ ಮೇಲಿನ ಇರಾನ್‌ ದಾಳಿಯನ್ನ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. 

ʻಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದೆ. ಈ ಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನ ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನ ಬೆಂಬಲಿಸುತ್ತೇವೆʼ ಎಂದು ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Related Articles

Back to top button