ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಬಾರಿ ಪುನಃ ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ.
2006ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸಿದ್ದರು. ಅದು ಭಾರೀ ಜನಪ್ರಿಯತೆಯನ್ನು ತಂದುಕೊಟ್ಟಿತ್ತು.
ಆಗ ಗ್ರಾಮದ ಒಂದು ಮನೆಯಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಜನರ ಅಹವಾಲುಗಳನ್ನೂ ಆಲಿಸುತ್ತಿದ್ದರು. ಈ ಬಾರಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಇದರಿಂದ ಶಾಲೆ ಸುಧಾರಣೆಯಾಗುವ ನಿರೀಕ್ಷೆ ಇದೆ.
ಗ್ರಾಮದಲ್ಲಿ 24 ಗಂಟೆ ಇದ್ದು ಜನರ ಅಹವಾಲನ್ನು ಆಲಿಸುವ ನಿರೀಕ್ಷೆ ಇದೆ. ಮಡಿಕೇರಿಯಿಂದ ಈ ಬಾರಿಯ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ