ಉಚಿತ ಆರೋಗ್ಯ ತಪಾಸಣಾ ಶಿಬಿರ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
 ನಗರದ ಶ್ರೀನಗರದಲ್ಲಿರುವ ಶ್ರೀಗುರು ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಹಿರೇಮಠ, ಹಿರಿಯ ನಾಗರಿಕರಿಗೆ ಪೌಷ್ಟಿಕ ಆಹಾರ ಸೇವನೆಯ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ವಂಟಮುರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಾನಂದ ದನವಂತ ಹಿರಿಯ ನಾಗರಿಕರಿಗೆ ಮದುಮೇಹ ಬರಲು ಕಾರಣಗಳು, ಲಕ್ಷಣಗಳು ಹಾಗೂ ಪರಿಹಾರೋಪಾಯಗಳ ಬಗ್ಗೆ ತಿಳಿಸಿದರು. ಮಹಾವೀರ ಘುಳನ್ನವರ ರೂಪಿಸಿದರು. ಎ.ಕೆ. ಬಂಗೆನ್ನವರ ವಂದಿಸಿದರು.

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button