ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಡಿಯಲ್ಲಿ ಕಿಣಯೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಅಂಗವಾಗಿ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಡಾ. ಕೊಡಕಣಿ ನೇತ್ರ ಕೇಂದ್ರದ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.