Latest

ಉತ್ತರದ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕ ಬೆನಕೆ ಮನವಿ

 

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ಉತ್ತರ ಮತಕ್ಷೇತ್ರದ ಅಭಿವೃಧ್ದಿಗಾಗಿ ಶಾಸಕ ಅನಿಲ ಬೆನಕೆ ನಗರಾಭಿವೃದ್ಧಿ ಸಚಿವರಾದ ಯು.ಟಿ.ಖಾದರ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ ಅಹ್ಮದರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಸುಸಜ್ಜಿತ ಸಿ.ಸಿ.ರಸ್ತೆಗಳು, ಒಳಚರಂಡಿ ಹಾಗೂ ವಸತಿ ಪ್ರದೇಶಗಳ ಸಮಸ್ಯೆಗಳನ್ನು ಹೊಗಲಾಡಿಸಲು ಮತ್ತು ಇನ್ನಿತರೆ ಅಭಿವೃಧ್ದಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ನಗರಾಭಿವೃಧ್ದಿ ಸಚಿವರಾದ ಯು.ಟಿ.ಖಾದರ ಹಾಗೂ ಅಲ್ಪ ಸಂಖ್ಯಾತ ಕಲ್ಯಾಣ ಸಚಿವರಾದ ಜಮೀರ ಅಹ್ಮದರವರನ್ನು ಸುವರ್ಣ ಸೌಧದಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.
ಉತ್ತರ ಮತಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಹಾಗೂ ವಸತಿ ಸಮಸ್ಯೆಯನ್ನು ಆದಷ್ಟು ಬೇಗನೆ ಪರಿಹರಿಸಲು ಅನುದಾನ ಮಂಜೂರು ಮಾಡಲು ವಿನಂತಿಸಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಬರುವ ದಿನಗಳಲ್ಲಿ ಚರ್ಚಿಸಿ ಅನುದಾನ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

Home add -Advt

Related Articles

Back to top button