Latest

ಉಮೇಶ ಜಾಧವ್ ಬದಲು ಪ್ರತಾಪ್ ಗೌಡಗೆ ಉಗ್ರಾಣ ನಿಗಮ -ರಾತ್ರೋರಾತ್ರಿ ಸಿಎಂ ಹಲವು ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ರಾತ್ರೋರಾತ್ರಿ ಹಲವು ಆದೇಶಗಳನ್ನು ಹೊರಡಿಸಿದ್ದಾರೆ.

ಅತೃಪ್ತ ಶಾಸಕ ಉಮೇಶ ಜಾಧವ ಅವರಿಗೆ ನೀಡಲಾಗಿದ್ದ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನವನ್ನು ರದ್ಧುಪಡಿಸಿರುವ ಮುಖ್ಯಮಂತ್ರಿಗಳು, ಆ ಹುದ್ದೆಯನ್ನು ಪ್ರತಾಪಗೌಡ ಪಾಟೀಲ್ ಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಶಾಸಕ ಬಸನಗೌಡ ದದ್ದಲ್ ಅವರನ್ನು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಅವರನ್ನು ಜಲಸಂಪನ್ಮೂಲ ಸಚಿವರ ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದಶ ಹೊರಡಿಸಲಾಗಿದೆ.

ಈ ಬೆಳವಣಿಗೆಯಿಂದಾಗಿ ಸರಕಾರಕ್ಕೆ ಕಂಟಕಪ್ರಾಯರಾಗಿರುವ ಅತೃಪ್ತ ಶಾಸಕರ ವಿರುದ್ಧ ಕಠಿಣ ಕ್ರಮ ಆರಂಭಿಸಿದಂತಾಗಿದೆ. 

ಈ ಮಧ್ಯೆ ಅತೃಪ್ತ ಶಾಸಕರಾದ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ನಾಗೇಂದ್ರ ಮೊದಲಾದವರು ಮುಂಬೈಯಿಂದ ಚೆನ್ನೈ ಮೂಲಕ ಬೆಂಗಳೂರು ತಲುಪಿದ್ದಾರೆ ಎನ್ನಲಾಗಿದ್ದು, ಶುಕ್ರವಾರ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗುತ್ತಾರೋ… ರಾಜಿನಾಮೆ ನೀಡುತ್ತಾರೋ ಕಾದು ನೋಡಬೇಕಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button