Karnataka NewsLatest

*ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಹೊತ್ತಿ ಉರಿದ ಕಟ್ಟಡ*

ಪ್ರಗತಿವಾಹಿನಿ ಸುದ್ದಿ: ನಾಲ್ಕು ಅಂತಸ್ತಿನ ಕಟ್ಟಡವೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಸುಧಾಮ ನಗರದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಸಂಭವಿಸಿದ ಈ ಘಟನೆಯಲ್ಲಿ ಕಟ್ಟಡದ ಕೆಳಮಹಡಿಯಲ್ಲಿ ಹೆಲ್ಮೆಟ್ ಮತ್ತು ಮೊಬೈಲ್ ಅಂಗಡಿಗಳಿದ್ದು, ಅವುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಮೇಲಿನ ಮಹಡಿಗಳಲ್ಲಿ ಮನೆಗಳಿದ್ದವು. ಬೆಂಕಿ ಕಾಣಿಸಿಕೊಂಡ ತಕ್ಷಣ, ಕಟ್ಟಡದಲ್ಲಿದ್ದ ನಿವಾಸಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಕ್ಷಣವೇ ಹೊರಗೋಡಿ ಬಂದಿದ್ದಾರೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button