ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿ ಸಿದ್ದರಾಮಪ್ಪ ಇಟ್ಟಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇಟ್ಟಿ ಈವರೆಗೆ ಚಿಕ್ಕೋಡಿಯಲ್ಲಿ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿದ್ದರು. ಗುರುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಇಟ್ಟಿ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಈವರೆಗೆ ಪ್ರಾಚಾರ್ಯರಾಗಿದ್ದ ಎಸ್.ಎಸ್.ಸಾಲಿಮಠ ಅವರಿಗೆ ಬೀಳ್ಕೊಡುಗೆಯೂ ನಡೆಯಿತು. ನಾಗನೂರು ರುದ್ರಾಕ್ಷಿಮಠದ ಸಿದ್ದರಾಮ ಸ್ವಾಮಿಗಳು ಈ ಸಂದರ್ಭದಲ್ಲಿದ್ದರು.
ಪ್ರಸಾದ ರಾಮಪುರೆ ಚಿಕ್ಕೋಡಿ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ