Latest

ಕ್ಷಮೆಯಾಚಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಚಿರಂಜೀವಿ ಸರ್ಜಾ ಕುರಿತ ಹೇಳಿಕೆಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್, ಮೇಘನಾ ರಾಜ್ ಕ್ಷಮೆಯಾಚಿಸಿದ್ದಾರೆ.

ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದ್ದು, ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ನಟಿ ಮೃಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಇಂದ್ರಜಿತ್ ಲಂಕೇಶ್ ಕ್ಷಮೆಯಾಚಿಸಿದ್ದಾರೆ.

Home add -Advt

ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಚಿರು ಬಗ್ಗೆ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಿರಲಿ. ಈ ಬಗ್ಗೆ ನಾನು ಅವರ ಕುಟುಂಬವನ್ನು ಭೇಟಿಯಾಗಿ ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದಿದ್ದಾರೆ.

ಡ್ರಗ್ಸ್ ವಿಚಾರವಾಗಿ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಇತ್ತೀಚೆಗೆ ಸಾವನ್ನಪ್ಪಿದ್ದ ಯುವನಟನ ಪೋಸ್ಟ್ ಮಾರ್ಟಮ್ ಯಾಕೇ ಮಾಡಿಲ್ಲ ಎಂದು ಪ್ರಶ್ನಿಸಿದ್ದರು. ಈ ಹಿನ್ನಲೆಯಲ್ಲಿ ನಟಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

Related Articles

Back to top button