ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ ಮಾಲಿಕರುಗಳಿಗೆ ತಮ್ಮ ಆಸ್ತಿ ತೆರಿಗೆಯನ್ನು ಏಪ್ರೀಲ್ 1 ರಿಂದ 30 ರೊಳಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನಿಡಲಾಗುವುದು. ಹಾಗೂ ತೆರಿಗೆದಾರರಿಗೆ ತಮ್ಮ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಸಾಪ್ಟವೇರ್‌ನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ.
ಆಸ್ತಿ ತೆರಿಗೆದಾರರು ಈಗಾಗಲೇ ಪಿಐಡಿ ನಂಬರ್ ಹೊಂದಿರುವವರು ಪಾಲಿಕೆಯ ವೆಬ್‌ಸೈಟ್ ಮೂಲಕ ಗಣಕೀಕೃತ ಫಾರ್ಮ-1 ಮಾಡಿಕೊಂಡು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ನಿಂದ www.belagavicitycorp.org ಆನ್‌ಲೈನ್ ಹಾಗೂ ಪೇಟಿಎಂ ಮೂಲಕ ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ.
ಅಲ್ಲದೇ ಮಹಾನಗರ ಪಾಲಿಕೆಯ ವಲಯ ಕಚೇರಿಗಳ ಕಂದಾಯ ನಿರೀಕ್ಷಕರ ಕಾರ್ಯಾಲಯ ಹಾಗೂ ಬೆಳಗಾವಿ-1 ಕೇಂದ್ರದಲ್ಲಿ ಎಸ್.ಎ.ಎಸ್. ಫಾರ್ಮ-1 ಪಡೆದು ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ