ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಅಥಾ ಚಿಕ್ಕೋಡಿಯ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಬೆಳಗಾವಿ ಕ್ಷೇತ್ರದ ಅಭ್ಯರ್ಥಿ ವಿ.ಎಸ್.ಸಾಧುನವರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿ ಬೆಳಗಾವಿಯಿಂದ ಸ್ಪರ್ಧಿಸುತ್ತಾರೆ ಎನ್ನುವುದೆಲ್ಲ ಕೇವಲ ವದಂತಿ. ಅವರು ಚಿಕ್ಕೋಡಿಯಲ್ಲೇ ಸ್ಪರ್ಧಿಸಲಿದ್ದಾರೆ. ನಾನು ಬೆಳಗಾವಿಯಿಂದಲೇ ಸ್ಪರ್ಧಿಸುತ್ತೇನೆ ಎಂದರು.
ಸುರೇಶ ಅಂಗಡಿ 3 ಬಾರಿ ಆಯ್ಕೆಯಾದರೂ ಯಾವುದೇ ಕೆಲಸ ಮಾಡಿಲ್ಲ. ಹಾಗಾಗಿ ಜನರು ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. ಇದು ನನಗೆ ಸುಲಭವಾಗಿ ಗೆಲುವು ತಂದುಕೊಡಲಿದೆ ಎಂದರು.