Kannada NewsLatest

ರಾಹುಲ್ ಗಾಂಧಿ ಬಿಜೆಪಿಯವರಿಗೆ ಸಿಂಹಸ್ವಪ್ನ: ಮಲ್ಲಿಕಾರ್ಜುನ ಖರ್ಗೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಜೆಪಿಯವರ ಕನಸಲ್ಲೂ ಬರುತ್ತಾರೆ. ಹಾಗಾಗಿ ಎಲ್ಲಿ ಹೋದರೂ ಬಿಜೆಪಿ ನಾಯಕರು ರಾಹುಲ್ ಗಾಂಧಿ ಬಗ್ಗೆಯೇ ಮಾತನಾಡುತ್ತಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ ಚುನಾವಣಾ ಪ್ರಚಾರಕ್ಕೆ ಹೋದರೂ ಅವರ ಬಗ್ಗೆ ಮಾತಾಡುತ್ತಾರೆ. ಪ್ರಚಾರಕ್ಕೆ ಹೋಗಿಲ್ಲವೆಂದರೆ ಯಾಕೆ ಹೋಗಿಲ್ಲ ಎಂದು ಕೇಳುತ್ತಾರೆ. ರಾಹುಲ್ ಗಾಂಧಿ ಬಿಜೆಪಿಯವರಿಗೆ ಸಿಂಹಸ್ವಪ್ನರಾಗಿದ್ದಾರೆ. ರಾಹುಲ್ ಗೆ ಬಿಜೆಪಿಯವರು ಹೆದರುತ್ತಿದ್ದಾರೆ ಎಂದರು.

ಇವರಿಗೆ ರಾಹುಲ್ ಗಾಂಧಿ ಹೆಸರಿಲ್ಲದೇ ಎಲೆಕ್ಷನ್ ಮಾಡಲು ಸಾಧ್ಯವಾಗುತ್ತಿಲ್ಲ. ಕೇರಳ, ತಮಿಳುನಾಡಿನಲ್ಲೂ ರಾಹುಲ್ ಟೀಕೆ ಮಾಡುತ್ತಾರೆ. ರಾಹುಲ್ ಗಾಂಧಿಯವರನ್ನು ಕುಗ್ಗಿಸಲು ಪದೇ ಪದೇ ಟೀಕೆ ಮಾಡುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ಮುಂದೆ ರಾಹುಲ್ ಗಾಂಧಿ ದೇಶದ ಮಹಾನ್ ನಾಯಕರಾಗುತ್ತಾರೆ ಎಂದು ಹೇಳಿದರು.

ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಡಿ.ಕೆ.ಶಿವಕುಮಾರ್

Home add -Advt

Related Articles

Back to top button