ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಮಿಕರ ಸನ್ಮಾನ ದಿನ ಹಾಗೂ ಕಾರ್ಮಿಕರ ಸನ್ಮಾನ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.
ಸಂಸದ ಸುರೇಶ್ ಅಂಗಡಿ ಸಮಾರಂಭ ಉದ್ಘಾಟಿಸಿ ಕಾರ್ಮಿಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಅಪರ ಜಿಲ್ಲಾಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ವಕೀಲರಾದ ಎನ್.ಆರ್. ಲಾತೂರ್ ಮುಂತಾದವರು ಉಪಸ್ಥಿತರಿದ್ದರು.