Latest

ಕಿತ್ತೂರು ಭಾಗದಲ್ಲಿ ದೇಶಪಾಂಡೆ ಮತಯಾಚನೆ

ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು :
ಭಾರತದಲ್ಲಿರುವ ರೈತರು ಸಾಲದ ಸುಳಿಗೆ ಸಿಲುಕಿದಾಗ ದೇಶದ ಎಲ್ಲ ರೈತರ ಸಾಲಮನ್ನಾ ಮಾಡಿದ
ಕೀರ್ತಿ ಯುಪಿಎ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ತಾಲೂಕಿನ ಬೈಲೂರ ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರವಾಗಿ ಮತಯಾಚನೆ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ
ಆಡಳಿತದಲ್ಲಿರುವಾಗ ಆಗಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ರೈತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ದೇಶದ ಎಲ್ಲ ರೈತರ ಸಾಲಮನ್ನಾ ಮಾಡುವ ಮುಖಾಂತರ ಹೊಸ ಬದುಕು 
ಕಟ್ಟಿಕೊಳ್ಳಲು ಸಹಕಾರಿಯಾಗಿತ್ತು.
ಆದರೆ ಈಗೀರುವ ಬಿಜೆಪಿ ಸರ್ಕಾರ ರೈತರಿಗೆ ಕಿಂಚಿತ್ತೂ ಸಹಾಯ ಮಾಡದೆ ರೈತರನ್ನು ಕಡೆಗಣಿಸಿದೆ ಎಂದರು.
ಎಲ್ಲ ರಂಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮುಖಾಂತರ ಸಮಾಜದ ಮುಖ್ಯವಾಹಿನಿಗೆ ಅವರನ್ನು ಕಾಂಗ್ರೆಸ್ ಸರ್ಕಾರ ತಂದಿದೆ, ಗ್ರಾಮೀಣರಿಗೆ ಉದ್ಯೋಗ ದೊರೆಯದ ಸಂದರ್ಭದಲ್ಲಿ ಅವರ ಗ್ರಾಪಂ ವ್ಯಾಪ್ತಿಯಲ್ಲಿಯೇ ಅವರಿಗೆ ನರೇಗಾ ಯೋಜನೆಯ ಮುಖಾಂತರ
ಉದ್ಯೋಗ ದೊರಕಿಸಿ ಕೊಟ್ಟ ಕೀರ್ತಿಯೂ ಕಾಂಗ್ರೆಸ್ ಸರ್ಕಾರಕ್ಕೆಸಲ್ಲುತ್ತದೆ ಎಂದ ಅವರು, 
ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವ ಅನ್ನಭಾಗ್ಯ ಸೇರಿದಂತೆ ಹಲವಾರು ಭಾಗ್ಯಗಳನ್ನು ನೀಡಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ನಾಡಿನ ಜನತೆಯು ನೆಮ್ಮದಿ ಜೀವನ ಸಾಗಿಸಲು ಕಾಂಗ್ರೆಸ್ ಅನುಕೂಲ ಮಾಡಿಕೊಟ್ಟಿದೆ ಎಂದರು.
ಮೈತ್ರಿ ಸರ್ಕಾರದ ಒಪ್ಪಂದದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯನ್ನು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ ಎಂದರು.
ಇದಕ್ಕೂ ಮೊದಲು ತಾಲೂಕಿನ ಹುಣಶೀಕಟ್ಟಿ, ತಿಗಡೊಳ್ಳಿ, ನಿಚ್ಚಣಕಿ ಗ್ರಾಮಗಳಲ್ಲಿ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಜಿಪಂ ಮಾಜಿ ಸದಸ್ಯ ನಿಂಗಪ್ಪ ಹಣಜಿ ಮಾತನಾಡಿ ಕೆನರಾ ಕ್ಷೇತ್ರದಿಂದ ಮೈತ್ರಿ ಪಕ್ಷಗಳಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ದೊರೆತಿರುವುದು ನಮ್ಮ ಭಾಗ್ಯ. ಆದ್ದರಿಂದ ಮತದಾರರು ಕ್ಷೇತ್ರದ
ಅಭಿವೃದ್ದಿಗೆ ಸರಳ ಸಜ್ಜನ ವ್ಯಕ್ತಿಯಾದ ಆನಂದ ಅಸ್ನೋಟಿಕರ ಅವರಿಗೆ ಬೆಂಬಲಿಸಬೇಕೆಂದು ಹೇಳಿದರು.
ಜಿಪಂ ಸದಸ್ಯೆ ರಾಧಾ ಶ್ಯಾಮ ಕಾದ್ರೋಳ್ಳಿ, ಮಾಜಿ ಕೆಪಿಸಿಸಿ ಸದಸ್ಯ ಶಂಕರ ಹೊಳಿ, ಕಿತ್ತೂರು ಬ್ಲಾಕ್
ಕಾಂಗ್ರೆಸ್ ಅಧ್ಯಕ್ಷ ಕುಮಾರ ಬಿಕ್ಕಣ್ಣವರ, ಮಾಜಿ ಜಿಪಂ ಸದಸ್ಯ ನಿಂಗಪ್ಪ ಹಣಜಿ, ಪಪಂ ಅಧ್ಯಕ್ಷ ಹನೀಫ ಸುತಗಟ್ಟಿ ಸೇರಿದಂತೆ ಇತರರು ಇದ್ದರು.

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button