Latest

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಿನ್ನದ ರಥ ಅರ್ಪಣೆ ಕುರಿತಂತೆ ಸರಕಾರದ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನವಾಗಿ ಚಿನ್ನದ ರಥ ನಿರ್ಮಿಸಿ, ಅರ್ಪಿಸುವ ಕುರಿತಂತೆ ಮಾಧ್ಯಮಗಳಲ್ಲಿ ವಿಭಿನ್ನ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಸ್ಪಷ್ಟನೆ ನೀಡಿದೆ.
• ಈ ಯೋಜನೆಗೆ 2005 ರಲ್ಲಿಯೇ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಅಂದಿನ ದಿನಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಈ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು.
• ಇದಕ್ಕಾಗಿ ದೇವಾಲಯದಲ್ಲಿ ಲಭ್ಯವಿರುವ ಚಿನ್ನ ಬಳಸಿಕೊಂಡು ಉಳಿದ ಚಿನ್ನವನ್ನು ಬ್ಯಾಂಕಿನ ಮೂಲಕ ಖರೀದಿಸಲು ಸರ್ಕಾರ ಅನುಮೋದನೆ ನೀಡಿತ್ತು.
• ಈ ಆದೇಶಗಳಲ್ಲಿ ರಥ ನಿರ್ಮಾಣಕ್ಕೆ ಸರ್ಕಾರದ ಅನುದಾನ ಬಳಸದೆ, ಸಾರ್ವಜನಿಕರ ದೇಣಿಗೆ ಸಂಗ್ರಹ ಹಾಗೂ ದೇವಾಲಯದ ಸಂಪನ್ಮೂಲಗಳಿಂದಲೇ ರಥ ನಿರ್ಮಾಣ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.
• ಇತ್ತೀಚೆಗೆ ಶ್ರೀ ಕ್ಷೇತ್ರದ  ಭಕ್ತರು ಮುಖ್ಯಮಂತ್ರಿಗಳನ್ನು  ಭೇಟಿಯಾಗಿ ಹಿಂದಿನ ಸರ್ಕಾರಿ ಆದೇಶಗಳನ್ನು ಹಾಜರುಪಡಿಸಿ, ನನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದಾರೆ.
• ಈ ನಿಟ್ಟಿನಲ್ಲಿ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ
ಇದಕ್ಕೆ ಸಂಬಂಧಿಸಿದಂತೆ 2005 ಹಾಗೂ 2006 ರಲ್ಲಿ ಹೊರಡಿಸಿದ ಸರ್ಕಾರಿ ಆದೇಶ ಇಲ್ಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button