ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಹಾಗೂ ಶುದ್ದ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂತೆ ದೂರು ನಿರ್ವಹಣೆಗಾಗಿ ಘಟಕವನ್ನು ಪ್ರಾರಂಭಿಸಲಾಗಿದೆ. ದೂರು ನಿಯಂತ್ರಣ ಘಟಕಗಳ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಬೆಳಗಾವಿ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಎಸ್. ಅಸೂಟಿ ಅವರು ತಿಳಿಸಿದ್ದಾರೆ.
ಕಚೇರಿ ವಿಳಾಸ ಹಾಗೂ ದೂರವಾಣಿ ಸಂಖ್ಯೆ ವಿವರ:
ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು-ದೂ.೦೮೩೧-೨೪೨೦೮೩೫, ಬೆಳಗಾವಿ ಗ್ರಾ.ಕು.ನೀ ಮತ್ತು ನೈ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- ದೂ. ೦೮೩೧-೨೪೪೭೩೨೨, ಖಾನಾಪುರ ಗ್ರಾ.ಕು.ನೀ ಮತ್ತು ನೈ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು-ದೂ. ೦೮೩೩೬-೨೨೩೭೦೮, ಬೈಲಹೊಂಗಲ ಗ್ರಾ.ಕು.ನೀ ಮತ್ತು ನೈ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- ದೂ. ೦೮೨೮೮-೨೩೩೩೪೧, ಸವದತ್ತಿ ಗ್ರಾ.ಕು.ನೀ ಮತ್ತು ನೈ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು-ದೂ. ೦೮೩೩೦-೨೨೨೦೬೬, ರಾಮದುರ್ಗ ಗ್ರಾ.ಕು.ನೀ ಮತ್ತು ನೈ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- ದೂ. ೦೮೩೩೫-೨೪೨೬೩೩.
ದೂರುಗಳು ಇದ್ದಲ್ಲಿ ಸಂಪರ್ಕಿಸಬೇಕೆಂದು ಬೆಳಗಾವಿ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಎಸ್.ಅಸೂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ ಮತ್ತು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ