Latest

ಕುಮಾರಸ್ವಾಮಿ ತಲೆಕೆಡಿಸಿದ ಮಂಡ್ಯ ಗುಪ್ತಚರ ವರದಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಮಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಕುರಿತು ಗುಪ್ತಚರ ಇಲಾಖೆ ನೀಡಿರುವ ವರದಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಲೆಕೆಡಿಕೊಳ್ಳುವಂತೆ ಮಾಡಿದೆ.
 ಏ.21 ರ ನಂತರ ಕುಮಾರಸ್ವಾಮಿ ಅವರು ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಆಗಲೇ ಪುತ್ರ ನಿಖಿಲ್ ಸೋಲಿನ ಆತಂಕದಲ್ಲಿ ಮುಳುಗಿದ್ದ ಅವರು,   ಗುಪ್ತಚರ ವರದಿಯನ್ನೂ ತರಿಸಿಕೊಂಡಿದ್ದಾರೆ. ಮಂಡ್ಯ, ಮಳವಳ್ಳಿ, ಮದ್ದೂರು ಕ್ಷೇತ್ರಗಳಲ್ಲಿ ಜೆಡಿಎಸ್​ಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಈ ಹಿನ್ನೆಲೆಯಲ್ಲಿ ಆ ಮೂರು ಕ್ಷೇತ್ರದ ಶಾಸಕರಾದ ಶ್ರೀನಿವಾಸ್​, ಅನ್ನದಾನಿ ಮತ್ತು ಡಿ.ಸಿ. ತಮ್ಮಣ್ಣ ಅವರಿಗೆ ಕುಮಾರಸ್ವಾಮಿ  ಕ್ಲಾಸ್​ ತೆಗೆದುಕೊಂಡಿದ್ದಾರೆ. ನಿಖಿಲ್​ಗೆ ಹಿನ್ನಡೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಖಡಕ್​ ಆಗಿ ತಿಳಿಸಿದ್ದಾರೆ ಎನ್ನಲಾಗಿದೆ.
 ಬೆಂಗಳೂರಿನ  ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ರಾಜ್ಯ ಬಿಜೆಪಿ ಚುನಾವಣೆ ನಿರ್ವಹಣಾ ಸಮಿತಿ ಸಭೆಯಲ್ಲಿ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಗನಗೌಡ ಲೋಕಸಭೆ ಚುನಾವಣೆ ವರದಿ ಸಲ್ಲಿಸಿ,  ಬಿಜೆಪಿ ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ಸುಮಾರು 45 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button