Latest

ಕುರೇರ್, ಪ್ರೀತಂ ಸೇರಿ 6 ಅಧಿಕಾರಿ, ಸಿಬ್ಬಂದಿಗೆ ಸರ್ವೋತ್ತಮ ಪ್ರಶಸ್ತಿ; ಶನಿವಾರ ಪ್ರದಾನ

 

 

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಜಿಲ್ಲಾಡಳಿತ ನೀಡುವ ಸರ್ವೋತ್ತಮ ಪ್ರಶಸ್ತಿಗೆ 6 ಅಧಿಕಾರಿಗಳು ಭಾಜನರಾಗಿದ್ದಾರೆ.

ಪ್ರತಿವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸರಕಾರಿ ಅಧಿಕಾರಿ, ಸಿಬ್ಬಂದಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2018-19ನೇ ಸಾಲಿನ ಪ್ರಶಸ್ತಿಗೆ 6 ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. 

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಮ್ ನಸ್ಲಾಪುರೆ, ಚಿಕ್ಕೋಡಿಯ ಕೃಷಿ ಅಧಿಕಾರಿ ಶೈಲಜಾ ಬೆಳ್ಳಂಕಿಮಠ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಬಿ.ಕುಲಕರ್ಣಿ, ಕೃಷಿ ಮಾರುಕಟ್ಟೆ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲ್ವಿಚಾರಕ ನವೀನ್ ಪಾಟೀಲ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯದ ಪ್ರಥಮ ದರ್ಜೆ ಸಹಾಯಕ ಬಿ.ಆರ್.ಹೊಂಗಲ್ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button