ಪ್ರಗತಿವಾಹಿನಿ ಸುದ್ದಿ, ಶಿರಸಿ:
ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಓಣಿಕೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಳಚಿಕಟ್ಟು ಬಳಿ ಕೆಂಗ್ರೆಹೊಳೆಯಲ್ಲಿ ನಡೆದಿದೆ. ಶಾಲ್ಮಲಾ ನದಿಯ ಕೆಂಗ್ರೆಹೊಳೆಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಬೈಂದೂರು ಮೂಲದ
ದಿನೇಶ (35) ಹಾಗೂ ಶಿರಸಿ ಮೂಲದ ವಿನಾಯಕ (20) ಸಾವನ್ನಪ್ಪಿದ್ದಾರೆ. ಶಿರಸಿಯ ಕರಾವಳಿ ಹೊಟೆಲ್ನಲ್ಲಿ ನೌಕರರಾಗಿದ್ದ ಇಬ್ಬರು ಇಂದು ಕೆಲಸಕ್ಕೆ ರಜೆಯಿದ್ದ ನಿಮಿತ್ತ ಸ್ನಾನಕ್ಕಾಗಿ ಹೊಳೆಗೆ ತೆರಳಿದ್ದರು ಎನ್ನಲಾಗಿದೆ. ಸ್ನಾನ ಮಾಡಲು ನೀರಿಗಿಳಿದಾಗ ಆಯತಪ್ಪಿ ಬಿದ್ದು ಈ ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ