ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕೇಂದ್ರ ಸರಕಾರದಿಂದ 2,430 ಕೋಟಿ ರೂ. ಬರ ಪರಿಹಾರಕ್ಕಾಗಿ ಕೇಳಿದ್ದೇವೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಬೆಳಗಾವಿ ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದಲ್ಲಿ ರೈತರು ಬರ ಪರಿಹಾರ ಯೋಜನೆಯಲ್ಲಿ ಹಸಿರು ಮೇವು ಉತ್ಪಾದನೆ ಮಾಡಿರುವುದನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ರಾಜ್ಯದ 156 ತಾಲೂಕುಗಳು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಬರ ನಿರ್ವಹಣೆಗೆ ಪ್ರತಿಯೊಂದು ತಾಲೂಕಿಗೆ 25 ಲಕ್ಷ ರೂ. ನೀಡಲಾಗಿದೆ. ಜತೆಗೆ ಬರ ಪೀಡಿತವಲ್ಲದ ತಾಲೂಕುಗಳಿಗೂ 25 ಲಕ್ಷ ರೂ. ನೀಡಲಾಗಿದೆ. ಕುಡಿಯುವ ನೀರು ಕೊರತೆಯಾಗದಂತೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಬರಗಾಲದಲ್ಲಿ ಉದ್ಯೋಗ ಸಮಸ್ಯೆಯಾಗದಂತೆ ನರೇಗಾ ಕೂಲಿ ದಿನಗಳನ್ನು 100 ರಿಂದ 150 ಏರಿಸಲಾಗಿದೆ ಎಂದರು.
ಸಂಸದ ಸುರೇಶ ಅಂಗಡಿ, ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ, ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ, ಜಿಪಂ ಸಿಇಒ ಕೆ.ವಿ.ರಾಜೇಂದ್ರ, ಉಪವಿಭಾಗಧಿಕಾರಿ ಕವಿತಾ ಯೋಗಪ್ಪನವರ, ತಹಶೀಲ್ದಾರ ಮಂಜುಳಾ ನಾಯಕ, ಕೃಷಿ ಇಲಾಖೆ ಜಂಟಿ ನಿರ್ದೆಶಕ ಜಿಲಾನಿ ಮೊಕಾಶಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ