ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಗಣೇಶ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆೆ.
ಬುಧವಾರ ಗಣೇಶ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ರಾತ್ರಿ ಅಥವಾ ನಾಳೆ ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಗಣೇಶ ಅವರನ್ನು ಎಲ್ಲಿ ಬಂಧಿಸಲಾಗಿದೆ ಎನ್ನುವುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.
ಜನೆವರಿ 18ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಗಣೇಶ ಮೇಲಿದೆ.