ಪ್ರಗತಿವಾಹಿನಿ ಸುದ್ದಿ, ಕಾರವಾರ:
ಕಾರು ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರವಾರದ ನಾಲ್ವರು ಮೃತಪಟ್ಟಿದ್ದಾರೆ.
ಗೋವಾದ ಕಾನ್‍ಕೊಲಿಮ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಗಂಡ, ಹೆಂಡತಿ, ಆರು ತಿಂಗಳ ಮಗು ಮತ್ತು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೋವಾ ವಿಮಾನ ನಿಲ್ದಾಣದಿಂದ ಕಾರವಾರಕ್ಕೆ ಬರುತ್ತಿರುವಾಗ ಈ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ರಸ್ತೆ ಬದಿಯಲ್ಲಿರುವ ಹೊಂಡಕ್ಕೆ ಇಳಿದರೆ, ಕಾರಿನ (ಕೆಎ02-ಎಮ್‍ಡಿ 8957) ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ