
ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಚಾಂದಿನಿ (26) ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ತೀವ್ರ ಅವಸ್ಥರಾಗಿದ್ದ ತಾಯಿ-ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರುಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ. ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




