ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಐದು ಜನ ಅಭ್ಯರ್ಥಿಗಳು ಬುಧವಾರ ಒಟ್ಟು ೧೦ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಣ್ಣಾಸಾಹೇಬ ಶಂಕರ ಜೊಲ್ಲೆ ಅವರು ಮೂರು ಸೆಟ್ ನಾಮಪತ್ರ, ಪಕ್ಷೇತರ ಅಭ್ಯರ್ಥಿಗಳಾಗಿ ಮೋಹನ ಗುರಪ್ಪಾ ಮೋಟನ್ನವರ, ಜಿತೇಂದ್ರ ಸುಭಾಷ ನೇರ್ಲೆ, ಶ್ರೇಣಿಕ ಅಣ್ಣಾಸಾಹೇಬ ಜಂಗಟೆ ಅವರು ತಲಾ ಒಂದು ನಾಮಪತ್ರ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ ಬಾಬಣ್ಣಾ ಹುಕ್ಕೇರಿ ನಾಲ್ಕು ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಚಿಕ್ಕೋಡಿಯ ಮಿನಿವಿಧಾನ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ. ರಾಜೇಂದ್ರ. ಕೆ.ವಿ ನಾಮಪತ್ರಗಳನ್ನು ಸ್ವೀಕರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ