Latest

ಚುನಾವಣೆ ಪ್ರಚಾರಕ್ಕೆ ತೆರಳಿದ್ದ 7 ಜನ ಮಸಣಕ್ಕೆ

ಪ್ರಗತಿವಾಹಿನಿ ಸುದ್ದಿ, ಗಡಹಿಂಗ್ಲಜ

ಮಹಾರಾಷ್ಟ್ರದ ಗಡಹಿಂಗ್ಲಜ ಬಳಿ ಬಸ್ ಮತ್ತು ಟ್ರ್ಯಾಕ್ಸ್ ಮಧ್ಯೆ ಡಿಕ್ಕಿ ಸಂಭವಿಸಿ 7 ಜನರು ಸಾವಿಗೀಡಾಗಿದ್ದಾರೆ.

ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ಟ್ರ್ಯಾಕ್ಸ್ ನಲ್ಲಿ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.  ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗೆ ಟ್ರ್ಯಾಕ್ಸ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಸನಲ್ಲಿ 15ಕ್ಕೂ ಹೆಚ್ಚು ಜನರನ್ನು ತುಂಬಲಾಗಿತ್ತು. 8 ಜನ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಗಡಹಿಂಗ್ಲಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಚುನಾವಣೆ ಪ್ರಚಾರಕ್ಕೆ ಗಡಿ ಭಾಗದಲ್ಲಿ ಕುರಿಗಳನ್ನು ತುಂಬಿದಂತೆ ಜನರನ್ನು ತುಂಬಿಕೊಡು ಹೋಗುತ್ತಿರುವುದು ಸಾಮಾನ್ಯವಾಗಿದೆ. ಅಲ್ಲದೆ, ಅದರಲ್ಲಿದ್ದವರಲ್ಲಿ ಜೋಶ್ ಮಿತಿಮೀರಿ ಅವಘಡಕ್ಕೆ ಕಾರಣವಾಗುತ್ತಿದೆ. 

Related Articles

Back to top button