ಜನಾಗ್ರಹ ಸಭೆಗೆ ಕ್ಷಣಗಣನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಅಯೋಧ್ಯೆ ರಾಮಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಣಕ್ಕಾಗಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಬೆಳಗಾವಿಯಲ್ಲಿ ಆಯೋಜಿಸಿರುವ ಜನಾಗ್ರಹ ಸಭೆ 4 ಗಂಟೆಗೆ ಆರಂಭವಾಗಲಿದೆ.
ಇಲ್ಲಿಯ ಶಿವಾಜಿ ಉದ್ಯಾನದಿಂದ ಸಂಭಾಜಿ ಉದ್ಯಾನದವರೆಗೆ ಶೋಭಾಯಾತ್ರೆ ಆರಂಭವಾಗಿದ್ದು, ಕೆಲವೇ ಕ್ಷಣದಲ್ಲಿ ಸಭೆ ಶುರುವಾಗಲಿದೆ.
ಅಮರಾವತಿಯ ಜೀತೇಂದ್ರ ಮಹಾರಾಜ ಮತ್ತು ವಿಶ್ವಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರಂಜಿಮಠದ ಗುರುಸಿದ್ಧ ಸ್ವಾಮಿಗಳು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಘೋಡಗೇರಿಯ ಮಲ್ಲಯ್ಯ ಸ್ವಾಮಿಗಳು, ಬೆಳಗಾವಿಯ ಚಿತ್ ಪ್ರಕಾಶಾನಾಂದ ಸ್ವಾಮೀಜಿ, ಕೌಲಗುಡ್ಡದ ಅಮರೇಶ್ವರ ಮಹಾರಾಜರು ಆಶಿರ್ವಚನ ನೀಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ