Latest

ಮೂವರು ವಿದ್ಯಾರ್ಥಿನಿಯರು ನಾಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೂವರು ಶಾಲಾ ವಿದ್ಯಾರ್ಥಿನಿಯರು ದಿಢೀರ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸೆಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಸೆ.6ರಂದು ಶಾಲೆಗೆ ಹೋದವರು ಶಾಲೆಯಿಂದಲೇ ನಾಪತ್ತೆಯಾಗಿದ್ದಾರೆ. ಮಕ್ಕಳ ಬಗ್ಗೆ ವಿಚಾರಿಸಿದರೆ ಶಾಲಾ ಆಡಳಿತ ಮಂಡಳಿ ಸರಿಯಾಗಿ ಏನನ್ನೂ ಹೇಳುತ್ತಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

15 ವರ್ಷದ ಶಕ್ತೀಶ್ವರಿ, 16 ವರ್ಷದ ಮರುಣಿಕಾ ಹಾಗೂ 15 ವರ್ಷದ ನಂದಿನಿ ನಾಪತ್ತೆಯಾಗಿರುವ ವಿದ್ಯಾರ್ಥಿನಿಯರು.

ಆತಂಕಕ್ಕೀಡಾಗಿರುವ ಪೋಷಕರು ಬೆಂಗಳೂರಿನ ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಾಲುವೆಗೆ ಉರುಳಿ ಬಿದ್ದ ಆಟೋ; ಇಬ್ಬರು ಸ್ಥಳದಲ್ಲೇ ದುರ್ಮರಣ

https://pragati.taskdun.com/latest/auto-accidenthlc-kalveballarytwo-death/

Related Articles

Back to top button