ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಕೇಂದ್ರ ಹಣಕಾಸು ಖಾತೆ ಸಚಿವ ಅರುಣ ಜೈಟ್ಲೆ ಅನಾರೋಗ್ಯದಿಂದ ಅಮೇರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಣಕಾಸು ಖಾತೆಯ ಹೊಣೆಯನ್ನು ಸಚಿವ ಪಿಯೂಷ್ ಗೋಯಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಫೆ.1ರಂದು ಈ ವರ್ಷದ ಕೇದ್ರ ಬಜೆಟ್ ನ್ನು ಗೋಯಲ್ ಅವರೇ ಮಂಡಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿಯವರ ಶಿಫಾರಸ್ಸಿನ ಮೇರೆಗೆ ರಾಷ್ಟ್ರಪತಿಗಳು ಈ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದು, ಅರುಣ ಜೈಟ್ಲೆ ಖಾತೆ ರಹಿತ ಸಚಿವರಾಗಿ ಮುಂದುವರಿಯಲಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಜೈಟ್ಲೆ ಅಮೇರಿಕಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ವಾಪಸ್ ಬಂದ ನಂತರ ಹಣಕಾಸು ಖಾತೆಯನ್ನು ಪುನಃ ವಹಿಸಿಕೊಳ್ಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ