ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜನವರಿ 27 ರಂದು ಮುಂಜಾನೆ 9.30 ರಿಂದ ಮಧ್ಯಾಹ್ನ 3.30 ಗಂಟೆ ವರೆಗೆ ಬೆಳಗಾವಿ ಉದ್ಯಮಭಾಗದ ಕೆ.ಎಲ್.ಎಸ್. ಗೋಗಟೆ ಇನ್ಸ್ಟಿಟ್ಯುಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೋಮಾ, ಫಾರ್ಮಸಿ, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಮೇಳದಲ್ಲಿ ವಿಕಲಚೇತನರಿಗೂ ಉದ್ಯೋಗಾವಕಾಶದ ಸೌಲಭ್ಯವಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಈ ಕಛೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8951911567, 9743166178 ಸಂಪರ್ಕಿಸಲು ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಕೋರಿದ್ದಾರೆ.
(ಈ ಲಿಂಕ್ ನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ