Karnataka NewsPolitics

*ಲೋಕಾಯುಕ್ತ ವಿಚಾರಣೆಗೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಲೋಕಾಯುಕ್ತ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಏರ್ ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಕುಮಾರಸ್ವಾಮಿ, ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ.

ಇನ್ನು ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೂ ಲೋಕಾಯುಕ್ತ ನೊಟೀಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಯಡಿಯೂರಪ್ಪ ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.

Related Articles

Back to top button