ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಒಂದು ಲಕ್ಷ ಮನೆ ನಿರ್ಮಾಣ ಮಾಡುವ ಉದ್ದೇಶವಿದ್ದು, 2020ರ ಡಿಸೆಂಬರ್ ಅಂತ್ಯಕ್ಕೆ 46 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮಹಾನಗರದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣ ಯೋಜನೆಯನ್ನು ಪ್ರಕಟಿಸಿದ್ದರು. ಆದರೆ ಯೋಜನೆ ಕೇವಲ ಘೋಷಣೆಯಾಗಿಯೇ ಉಳಿದಿದ್ದು, ಒಂದೇ ಒಂದು ಮನೆ ಕೂಡ ನಿರ್ಮಾಣ ಮಾಡಿಲ್ಲ ಎಂದು ಗುಡುಗಿದರು.
ಬಿಜೆಪಿ ಸರ್ಕಾರ ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ಕೊಳಗೇರಿ ಪ್ರದೇಶದ ವಸತಿ ರಹಿತರಿಗೆ ಒಂದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಇದರಲ್ಲಿ 46 ಸಾವಿರ ಮನೆಗಳ ನಿರ್ಮಿಸಲು ಅನುಮೋದನೆ ಸಿಕ್ಕಿದೆ. ಇದೇ ತಿಂಗಳ 20 ರಂದು ಬೆಂಗಳೂರು ಮಹಾನಗರದ ಶಾಸಕರ ಸಭೆ ಕರೆಯಲಾಗಿದೆ. ಎಲ್ಲೆಲ್ಲಿ ವಸತಿಗಳನ್ನು ನಿರ್ಮಾಣ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಿದ್ದೇವೆ ಎಂದರು.
6 ಪ್ಯಾಕೇಜ್‍ಗಳಲ್ಲಿ ಈ ಯೋಜನೆ ಕಾಮಗಾರಿ ನಡೆಯಲಿದೆ. ಐದು ವರ್ಷ ಗುತ್ತಿಗೆದಾರರೇ ನಿರ್ವಹಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಇನ್ನು ಮುಂದೆ ಬೆಂಗಳೂರು ಮಹಾ ನಗರದಲ್ಲಿ ಬಹುಮಹಡಿ ಕಟ್ಟಡ ಗಳನ್ನು ನಿರ್ಮಾಣ ಮಾಡುವುದಿಲ್ಲ. ಏಕೆಂದರೆ ನಮಗೆ ಎಕರೆಗಟ್ಟಲೆ ಜಮೀನು ಸಿಗುತ್ತಿಲ್ಲ.ಜಿ+3 ಮಾತ್ರ ಕಟ್ಟಲಾಗು ವುದು. 14 ಮಹಡಿ ಮತ್ತಿತರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ