Kannada NewsKarnataka NewsLatestPolitics
*ಡಿ.ಕೆ.ಶಿವಕುಮಾರ್ ದೆಹಲಿಗೆ: ಯಾರೂ ಬೇಡ ಅಂದಿಲ್ಲ ಎಂದ ಸಿದ್ದರಾಮಯ್ಯ*

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕರೆದರೆ ಮಾತ್ರ ದೆಹಲಿಗೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

