
ಪ್ರಗತಿವಾಹಿನಿ ಸುದ್ದಿ: ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲು ತೂರಾಟ ಖಂಡಿಸಿ ಪುನೀತ್ ಕೆರೆಹಳ್ಳಿ ಮದ್ದೂರಿಗೆ ತೆರಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಅಲ್ಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ನು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ದಂಡಾಧಿಕಾರಿ ಆರೋಪಿ ಪುನೀತ್‌ಗೆ ಸೂಚನೆ ನೀಡಿದ್ದರು. ಆದರೆ, ಮುಚ್ಚಳಿಕೆ ಬರೆದುಕೊಡಲು ಪುನೀತ್ ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿದೆ.
ಪುನೀತ್ ಕೆರೇಹಳ್ಳಿ ಇದುವರೆಗೂ 14 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. BNSS ಸೆಕ್ಷನ್ 127ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಎದುರು ಹಾಜರು ಪಡಿಸಲಾಗಿದೆ.