ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಮಾತನಾಡಲಿದ್ದಾರೆ.
ರಾತ್ರಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ನಡೆದಿರುವ ದಾಳಿ ಕುರಿತು ಪ್ರಧಾನಿ ಪೂರ್ಣ ವಿವರ ನೀಡಲಿದ್ದಾರೆ.
ಪ್ರಧಾನಿ ಈಗಾಗಲೆ ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಮಧ್ಯೆ, ಪಾಕಿಸ್ತಾನ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದು ಮುಂದಿನ ಕಾರ್ಯ ಯೋಜನೆ ರೂಪಿಸುತ್ತಿದೆ. ಈಗಾಗಲೆ ಚೀನಾವನ್ನೂ ಸಂಪರ್ಕಿಸಿರುವ ಸಾಧ್ಯತೆ ಇದೆ.
ನವದೆಹಲಿ ಸೇರಿದಂತೆ ಭಾರತದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಎರಡೂ ರಾಷ್ಟ್ರಗಳ ಮುಂದಿನ ನಡೆ ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ