ಪ್ರಗತಿವಾಹಿನಿ ಸುದ್ದಿ, ನವದೆಹಲಿ:
ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಗಂಭೀರ್ ನಿನ್ನೆ ನಾಮಪತ್ರ ಸಲ್ಲಿಸಿದ್ದು, 147 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ. ಈ ಮೂಲಕ ಅವರು ದೆಹಲಿಯಲ್ಲಿ ಸ್ಪರ್ಧಿಸುತ್ತಿರುವ 349 ಅಭ್ಯರ್ಥಿಗಳಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಆಗಿದ್ದಾರೆ.
2017-18ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ನಲ್ಲಿ ವಾರ್ಷಿಕ 12.40 ಕೋಟಿ ರೂ. ಆದಾಯ ಹೊಂದಿರುವುದಾಗಿ ಗಂಭೀರ್ ಘೋಷಿಸಿಕೊಂಡಿದ್ದಾರೆ.
ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದಿಂದ ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಿನ್ನೆ ನಾಮಪತ್ರ ಸಲ್ಲಿಸಿದರು. ಅವರು 4.92 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ