
ನಟ ಧನ್ವೀರ್ ಹಾಗೂ ವಿಜಯಲಕ್ಷ್ಮೀ ದರ್ಶನ್ ನಡುವಿನ ಕೋಲ್ಡ್ ವಾರ್ ಇದೀಗ ಕೋರ್ಟ್ ಮೆಟ್ಟಿಲೇರಿದೆ. ಧನ್ವೀರ್ ವಿರುದ್ಧ ವಿಜಯಲಕ್ಷ್ಮೀ ದರ್ಷನ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ವಿಜಯಲಕ್ಷ್ಮೀ ಅವರು ಬೆಂಗಳೂರು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲು ಮಾಡಿದ್ದಾರೆ.
ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಈ ದೂರು ಸಲ್ಲಿಕೆಯಾಗಿದೆ. ನಟ ಧನ್ವೀರ್ ಅವರು ತಮ್ಮ ವಿರುದ್ಧ ಮಾನನಷ್ಟ ಆಗುವಂತಹ ಹೇಳಿಕೆಗಳನ್ನು ನೀಡಿದ್ದು, ಆ ಹೇಳಿಕೆಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಿ ಪ್ರಸಾರ ಮಾಡಲಾಗಿದೆ ಎಂದು ವಿಜಯಲಕ್ಷ್ಮಿ ದೂರಿನಲ್ಲಿ ಆರೋಪಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356(2) ರ ಅಡಿಯಲ್ಲಿ ಮಾನನಷ್ಟ ಆರೋಪ ಹೊರಿಸಲಾಗಿದ್ದು, ಆರೋಪಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ ದಾಖಲೆಗಳು, ಆಡಿಯೋ/ವೀಡಿಯೋ ರೆಕಾರ್ಡಿಂಗ್‌ಗಳನ್ನು ಸೂಕ್ತ ಸಾಕ್ಷ್ಯವಾಗಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆಗೆ ಅವಕಾಶ ನೀಡಬೇಕು ಹಾಗೂ ಬಿಎನ್‌ಎಸ್ ಸೆಕ್ಷನ್ 222(1) ರ ಅಡಿಯಲ್ಲಿ ಈ ಖಾಸಗಿ ದೂರನ್ನು ಪರಿಗಣಿಸಿ, ಆರೋಪಿ ಧನ್ವೀರ್ ವಿರುದ್ಧ ಸೆಕ್ಷನ್ 227 ರ ಅಡಿಯಲ್ಲಿ ಸಮನ್ಸ್ ಜಾರಿಗೊಳಿಸಬೇಕೆಂದು ನ್ಯಾಯಾಲಯಕ್ಕೆ ಕೋರಲಾಗಿದೆ.




