ಪ್ರಗತಿವಾಹಿನಿ ಸುದ್ದಿ, ಖಾನಾಪುರ
ತಾಲ್ಲೂಕಿನ ನಂದಗಡ ಗ್ರಾಮದ ನಾಲ್ಕು ಮನೆಗಳಲ್ಲಿ ಹಾಡಹಗಲೇ ಕಳ್ಳತನ ನಡೆದು ಲಕ್ಷಾಂತರ ಮೌಲ್ಯದ ನಗ-ನಾಣ್ಯ ಕಳ್ಳರ ಪಾಲಾಗಿದೆ.
ನಂದಗಡ ಗ್ರಾಮದ ಮಹಾದೇವ ದಳವಿ, ಅಶೋಕ ಪಾಟೀಲ, ಶಹಾನಾಜ ಬೇಪಾರಿ, ಆಲಮ್ ಪಟೇಲ ಅವರ ಮನೆಗಳಿಗೆ ಕನ್ನ ಹಾಕಿದ ಕಳ್ಳರು ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ. ನಾಲ್ಕೂ ಕಡೆ ಸೇರಿ ಒಟ್ಟು ಐದು ಲಕ್ಷ ರೂ. ಮೌಲ್ಯದ ನಗ-ನಾಣ್ಯ ಹೊತ್ತೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ